ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಾವಣಗೆರೆ ವತಿಯಿಂದ ಜ.14 ರಂದು ಸಂಜೆ 5 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸುಗ್ಗಿ ಹುಗ್ಗಿ-2021 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್ ಉದ್ಘಾಟಿಸುವರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ ಸಿದ್ದೇಶ್ವರ, ಜಿ.ಪಂ ಅಧ್ಯಕ್ಷೆ ಕೆ.ವಿ ಶಾಂತಕುಮಾರಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಜಿಲ್ಲಾ ಪಂಚಾಯತ್ ಸದಸ್ಯರು, ತಾಲ್ಲೂಕು ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಮತ್ತು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಉಪವಿಭಾಗಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು, ಹೊನ್ನಾಳಿ ತಹಶೀಲ್ದಾರ್ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



