ಧಾರವಾಡ: ಇಂದು ಬೆಳಗಿನಜಾವ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದಾವಣಗೆರೆಯ 11 ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಟ್ವಿಟ್ ಮೂಲಕ ಸಂತಾಪ ಸೂ ಸೂಚಿಸಿದ ಪ್ರಧಾನಿ, ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದಿದ್ದಾರೆ.
ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ: PM @narendramodi
— PMO India (@PMOIndia) January 15, 2021

ಸಂಕ್ರಾಂತಿ ಹಬ್ಬ ಹಿನ್ನೆಲೆ ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸ ತೆರಳುತ್ತಿದ್ಧ ಟೆಂಫೋ ಟ್ರಾವೆಲರ್ ಟಿಪ್ಪರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಟಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಿನ ಜಾವ ನಡೆದಿದೆ. 18 ಜನ ಪ್ರಯಾಣ ಬೆಳೆಸುತ್ತಿದ್ದರು . ಅದರಲ್ಲಿ 16 ಮಂದಿ ಮಹಿಳೆಯರು ಇದ್ದರು.

ಗೋವಾ ಪ್ರವಾಸಕ್ಕೆ ತೆರಳಿದ್ದ ಎಲ್ಲರೂ ಒಂದೇ ಬ್ಯಾಚ್ ನ ಸ್ನೇಹಿತರಾಗಿದ್ದರು. ಎಲ್ಲರೂ ದಾವಣಗೆರೆಯ ವಿದ್ಯಾನಗರ ನಿವಾಸಿಗಳಾಗಿದ್ದರು. ಜಗಳೂರಿನ ಮಾಜಿ ಶಾಸಕ ಗುರುಸಿದ್ಧನಗೌಡ ಸೊಸೆ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಸ್ರೀ ರೋಗ ತಜ್ಞೆ ವೀಣಾ ಪ್ರಕಾಶ್ ಕೂಡ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ತಾಯಿ-ಮಗಳು ಕೂಡ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



