Connect with us

Dvgsuddi Kannada | online news portal | Kannada news online

ಅತಿಥಿ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಪ್ರಮುಖ ಸುದ್ದಿ

ಅತಿಥಿ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಚಿತ್ರದುರ್ಗ: ಕೊರೊನಾ ಆತಂಕ ನಡುವೆ ಕಾಲೇಜು ಆರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದ ತರಗತಿ ನಡೆಯುತ್ತಿಲ್ಲ.  ಸರ್ಕಾರ ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು. ಬಸ್‌ ಪಾಸ್ ಸಮಸ್ಯೆ, ಹಾಸ್ಟೆಲ್‌ ಸೌಲಭ್ಯ ಹಾಗೂ ವಿದ್ಯಾರ್ಥಿ ವೇತನ ಕಲ್ಪಿಸುವಂತೆ ಒತ್ತಾಯಿಸಿದರು.

ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಕೋವಿಡ್ ಭಯ ಲೆಕ್ಕಿಸದೇ ಕಾಲೇಜುಗಳತ್ತ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಆದರೆ, ಬೆರಳೆಣಿಕೆಯಷ್ಟು ಪ್ರಾಧ್ಯಾಪಕರಿದ್ದು, ಕೆಲವೆಡೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ.ಬಸ್‌ ಸೌಲಭ್ಯ ಇಲ್ಲದೆಯೇ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಕಾಲೇಜು ಆರಂಭವಾದರೂ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇಲ್ಲ. ಈ ಕುರಿತು ಗಮನಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಕಾಲೇಜುಗಳಲ್ಲಿ ಶೌಚಾಲಯ, ಸೂಕ್ತ ಆಸನ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಉಚಿತ ಬಸ್‌ ಪಾಸ್ ನೀಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರ ನೇಮಕಕ್ಕೆ ರಾಜ್ಯದ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top