ಡಿವಿಜಿಸುದ್ದಿ.ಕಾಂ,ದಾವಣಗೆರೆ: ಕೇಂದ್ರ ಸರ್ಕಾರ ನೆರೆ ಸಂತ್ರಸ್ತರಿಗೆ ಅತ್ಯಂತ ಕಡಿಮೆ ಅನುದಾನ ಬಿಡುಗಡೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಪ್ರದೇಶಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಣ್ಣ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಿರುವುದು ಖಂಡನೀಯ. ರಾಜ್ಯ ಸರ್ಕಾರ ನೆರೆ ಸಂತ್ರಸ್ಥರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರವು ನೆರೆ ಸಂತ್ರಸತರಿಗೆ ನೆರೆವು ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಕೂಡಲೇ ನೆರೆ ಸಂತ್ರಸ್ತರಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಆರ್. ಮನೋಜ್, ಪ್ರವೀಣ್ ಕುಮಾರ್, ಮಂಜುನಾಥ್, ಭಾರತ್, ಹರಿಪ್ರಸಾದ್, ಮುಜ್‌ಹಿಂದ್, ಕುಮಾರ್ ಸೇರಿದಂತೆ ಮತ್ತಿತರಿದ್ದರು.



