ದಾವಣಗೆರೆ: 2020-21ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿ ಶೇ.50 ರ ಸಹಾಯಧನದಲ್ಲಿ ತಾಡಪಾಲು ವಿತರಣೆ ಅರ್ಜಿ ಆಹ್ವಾನಿಸಲಾಗಿದೆ. ಜ.20 ರಿಂದ 29 ರವರೆಗೆ ರೈತರುಗಳು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಜ.30 ರಂದು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ತಾಡಪಾಲುಗಳನ್ನು ವಿತರಿಸಲಾಗುವುದು. ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ ಅಥವಾ ಓಟರ್ ಐಡಿ ನಕಲು ಮತ್ತು ಫೋಟೋ ಸಲ್ಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.