ಬಾಗಲಕೋಟೆ: FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ನಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳ ಗ್ರಾಮದ ರಮೇಶ್ ಹೆರಕಲ್ ಎಂಬುವವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
KPSCಯಲ್ಲಿ SDA ಆಗಿರುವ ರಮೇಶ್ ಹೆರಕಲ್ ಪ್ರಶ್ನೆಪತ್ರಿಕೆ ಸೋರಿಕೆ ವಿಷಯ ಬಹಿರಂಗವಾದ ಬೆನ್ನಲ್ಲೇ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮಕ್ಕೆ ತೆರಳಿದ್ದನು. ಆರೋಪಿಯ ಬೆನ್ನತ್ತಿದ್ದ ಸಿಸಿಬಿ ಪೊಲೀಸರ ತಂಡ ರಮೇಶ್ನನ್ನು ಚಿಕ್ಕಪಡಸಲಗಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.



