ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು. ಈ ವೇಳೆ ಪರಿಸ್ಥಿತಿ ನಿಯಂತ್ರಣ ತೆಗೆದುಕೊಳ್ಳುವ ಸಲುವಾಗಿ ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾ ಪಡೆಗಳನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಮತ್ತು ಶಾಂತಿ ಕಾಪಾಡಲು ದೆಹಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಶಾ ಅವರಿಗೆ ವಿವರಣೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



