ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 22 ಪ್ರಕರಣಗಳನ್ನ ದಾಖಲಿಸಿದ್ದಾರೆ. 300 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ.
ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ನಿನ್ನೆ ಟ್ರ್ಯಾಕ್ಟರ್ ರಾಲಿ ಹಮ್ಮಿಕೊಂಡಿದ್ದರು. ಆದರೆ ಇದು ಹಿಂಸಾಚಾರಕ್ಕೆ ತಿರುಗಿತ್ತು.ಮುಕರ್ಬಾ ಚೌಕ್, ಗಾಜಿಪುರ, ಐಟಿಓ, ಸೀಮಾಪುರಿ, ನಂಗ್ಲೋಯಿ ಟಿ ಪಾಯಿಂಟ್, ಟಿಕ್ರಿ ಗಡಿ ಹಾಗೂ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.



