ಬೆಂಗಳೂರು: ಕೊರೋನಾ ಸೋಂಕಿನ ಭೀತಿಯ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸರ್ರಕಾರ ತಾತ್ಕಾಲಿ ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ. ಜೂನ್ 14 ರಿಂದ 25 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಅವರು, ಜೂನ್.14ರಂದು ಪ್ರಥಮ ಭಾಷೆ, ಜೂನ್ 16 ಗಣಿತ ಪರೀಕ್ಷೆ, ಜೂನ್ 18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂನ್ 21ರಂದು ವಿಜ್ಞಾನ, ಜೂನ್ 23ರಂದು ಹಿಂದಿ ಹಾಗೂ ಜೂನ್ 25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ವೇಳಾ ಪಟ್ಟಿ ಇದು ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ ಫೆಬ್ರವರಿ 26ರೊಳಗೆ ಸಲ್ಲಿಸುವಂತೆ ತಿಳಿಸಿದರು.