ಬೆಂಗಳೂರು : ಖಾಸಗಿ ಶಾಲೆಗಲ್ಲಿ ಶೇ.30ರಷ್ಟು ಶುಲ್ಕ ಕಡಿತ ಮಾಡುವುದಾಗಿ ನಿನ್ನೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದರು. ಇದೀಗ ಪೋಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶುಲ್ಕ ಕಡಿತ ಆದೇಶವನ್ನು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
2020-21ನೇ ಸಾಲಿನಲ್ಲಿನ ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಶೇ.30ರಷ್ಟು ವಿನಾಯಿತಿ ನೀಡಲಾಗಿದೆ. ಜೊತೆ ಶಾಲಾ ಬೋಧನಾ ಶುಲ್ಕವನ್ನು ಹೊರತು ಪಡಿಸಿ ಶಾಲೆಗಳು ಬೇರೆ ಯಾವುದೇ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ. ಒಂದು ವೇಳೆ ಪೋಷಕರು ಪೂರ್ಣ ಶುಲ್ಕವನ್ನು ನೀಡಿದ್ದರೆ, ಅಂತವರ ಶುಲ್ಕವನ್ನು ಮುಂದಿನ ಸಾಲಿಗೆ ಹೊಂದಾಣಿಕೆ ಮಾಡುವಂತೆ ಸೂಚನೆ ನೀಡಲಾಗಿದೆ.
ಪೋಷಕರಿಗೆ ಶಾಲಾ ಶುಲ್ಕ ಕಟ್ಟಲು ಮೂರು ಕಂತಿನ ಅವಕಾಶ ನೀಡಬೇಕ. ಇನ್ನು ಶಾಲಾ ಶುಲ್ಕ ಕಡಿತ ಆದೇಶ ಪಾಲನೆಗೆ ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಲು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.



