ವಿಜಯಪುರ: ಯುಗಾದಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದು, ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಅಮದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವುದು ಖಚಿತವಾಗಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.



