ಬೆಂಗಳೂರು: ರಾಜ್ಯದಲ್ಲಿ 1995ರ ಬಳಿಕ ಆರಂಭವಾಗಿರುವ ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಸಂಬಂಧ ಆರ್ಥಿಕ ಇಲಾಖೆಯ ಜತೆ ಚರ್ಚಿಸಿ, ಈ ಬಜೆಟ್‌ನಲ್ಲೇ ಅನುದಾನ ಮೀಸಲಿಡಲು ಪ್ರಯತ್ನಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಈ ಕುರಿತು ಬಿಜೆಪಿ ಸದಸ್ಯ ಅರುಣ್ ಶಹಪುರ ಮತ್ತು ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬೇಡಿಕೆ ಹಲವು ದಿನಗಳಿಂದ ಇದೆ. ಇದಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದೆ. ಬಜೆಟ್‌ನಲ್ಲಿ ವೇತನಾನುದಾನಕ್ಕೆ ಒಳಪಡಿಸಿ ಅನುದಾನ ಹಂಚಿಕೆಗೆ ಯತ್ನಿಸಲಾಗುವುದು.
ಸದಸ್ಯ ಅರುಣ್ ಶಹಪುರ ಮಾತನಾಡಿ, 1985ರಿಂದ 95ರ ಅವಧಿಯಲ್ಲಿ ಸ್ಥಾಪನೆಯಾಗಿರುವ ಖಾಸಗಿ ಶಾಲೆ ವೇತನಾನುದಾನಕ್ಕೆ ಒಳಪಡಿಸಲಾಗಿದೆ.ಅದೇ ರೀತಿ 1955ರ ಬಳಿಕದ ಶಾಲೆಗಳನ್ನು ಕೂಡ ವೇತನಾನುದಾನಕ್ಕೆ ಒಳಪಡಿಸಬೇಕು ಎಂದು ಮನವಿ ಮಾಡಿದರು.