ದಾವಣಗೆರೆ: ಮೀಸಲಾತಿ ಹೆಚ್ಚಳಕ್ಕೆ ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ. ಗಡುವು ಮುಗಿದ ನಂತರ ಹೋರಾಟ ಬಗ್ಗೆ ತೀರ್ಮಾನಿಸುತ್ತೇವೆ. ವಾಲ್ಮೀಕಿ ಜಾತ್ರೆಯಲ್ಲೂ ಈ ಕುರಿತು ಒತ್ತಡ ಹಾಕುತ್ತೇವೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶೋಷಿತ ಸಮುದಾಯಕ್ಕೆ ನ್ಯಾಯ ಸಿಗುವುದು ಕಷ್ಟ. ಹೀಗಾಗಿಯೇ ಹೋರಾಟ ಮಾಡುತ್ತಲೇ ಬಂದಿದ್ದೇವೆ ಎಂದರು.
ರಾಜನಹಳ್ಳಿಯ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಬೇಡಿಕೆ ಈಡೇರುವ ವಿಶ್ವಾಸ ಇದೆ. ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಮ್ಮ ಸಮಾಜಕ್ಕೆ ನ್ಯಾಯ ಒದಗಿಸಲಿದ್ದಾರೆ ಎಂದು ತಿಳಿಸಿದರು.
ಸರ್ಕಾರ ನಾಗಮೋಹನ್ ದಾಸ್ ಆಯೋಗ ಹಾಗೂ ಉಪಸಮಿತಿ ಮಾಡಿ ಶೇ 90 ರಷ್ಟು ಕೆಲಸ ಮುಗಿಸಿದೆ. ಶೇ 7.5 ಮೀಸಲಾತಿ ಬಾಕಿ ಇದೆ ಎಂದರು.



