ಬೆಂಗಳೂರು: ಅನೂಪ್ ಭಂಡಾರಿ ನಿರ್ದೇಶನ, ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾವನ್ನು 6 ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಈ ಕುರಿತು ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
ಕಿಚ್ಚ ಸುದೀಪ್ ವಿಶ್ವದ ಅತಿ ದೊಡ್ಡ ಬುರ್ಜ್ ಖಲೀಫಾ ಕಟ್ಟಡದಲ್ಲಿ ವಿಕ್ರಾಂತ್ ರೋಣ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದರು. ಕಿಚ್ಚ ಸುದೀಪ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದರು.ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಕನ್ನಡ, ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಸೇರಿದಂತೆ ಇಂಗ್ಲಿಷ್ ಭಾಷೆಯಲ್ಲೂ ಈ ಸಿನಿಮಾ ರಿಲೀಸ್ ಮಾಡಲಿದ್ದಾರೆ.
#VikrantRona
Kannada, Hindi & English logohttps://t.co/eBRHwzi5XW pic.twitter.com/cIm8SN8sBx— Kichcha Sudeepa (@KicchaSudeep) February 1, 2021



