Connect with us

Dvgsuddi Kannada | online news portal | Kannada news online

ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ:  2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮವದಡಿ ರಾಜ್ಯ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು https://ssp.postmatric.karnataka.gov.in ನಲ್ಲಿ  ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯ ದಿನವಾಗಿರುತ್ತದೆ.

ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. 2004ರವರೆಗೆ ಎಸ್.ಎಸ್.ಎಲ್.ಸಿ /10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. 2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪಿಯುಸಿ/ಪದವಿ/ಇತರೆ ಕೋರ್ಸ್‍ಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. ಹೊರ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. ಸ್ಟ್ಯಾಂಡ್ ಅಲೋನ್ ಇನ್ಸ್ಟಿಟ್ಯೂಟ್ಸ್ ( Stand Alone Institutes) ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇ-ದೃಢೀಕರಣಾ ಪೋರ್ಟಲ್‍ನಲ್ಲಿ ಅರ್ಜಿದಾರರ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಇ-ದೃಢೀಕರಣಾ ಅಧಿಕಾರಿಯಾಗಿರುತ್ತಾರೆ. ಅದರಂತೆ ಇ-ದೃಢೀಕರಣಾ ಪೋರ್ಟಲ್‍ನಲ್ಲಿ ತಮ್ಮ ದಾಖಲಾತಿಗಳನ್ನು ಸಲ್ಲಿಸಿ, ಇ-ದೃಢೀಕರಣಾಧಿಕಾರಿಯಾದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top