ದಾವಣಗೆರೆ: ಫೆ. 3 ರಂದು ದಾವಣಗೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ರಂಗನಾಥ ಫೀಡರ್ ವ್ಯಾಪ್ತಿಗಳಲ್ಲಿ ಸ್ಮಾರ್ಟ್ ಸಿಟಿ /ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಮ್.ಸಿ.ಸಿ.ಬಿ ವ್ಯಾಪ್ತಿಯ ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ, ಬಿ.ಐ.ಇ.ಟಿ. ಕಾಲೇಜುರಸ್ತೆ, ಎಸ್.ಎಸ್. ಮಾಲ್, ಲಕ್ಷ್ಮೀ ಫ್ಲೋರ್ ಮಿಲ್ ಸುತ್ತ ಮುತ್ತ ಪ್ರದೇಶಗಳು. ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿನಗರ, ಕುಂದುವಾಡರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡಕೆರೆ ಹಾಗೂ ಸುತ್ತಮುತ್ತ ಪ್ರದೇಶಗಳು ಹಾಗೂ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಮುಖ್ಯರಸ್ತೆಯ ಆಂಜನೇಯ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.