ಹರಿಹರ: ಫೆಬ್ರವರಿ 8 ಮತ್ತು 9 ರಂದು ಹರಿಹರ ದ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಪೀಠದಲ್ಲಿ ನಡೆಯಲಿರುವ 3ನೇ ವಾಲ್ಮೀಕಿ ಜಾತ್ರೆ ಯಲ್ಲಿ ಭಾಗವಹಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನಿಸಲಾಯಿತು.
ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಆಹ್ವಾನಿಸಿದರು.ಫೆಬ್ರವರಿ. 9ರಂದು ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿರುವ ಸಿಎಂ, ವಾಲ್ಮೀಕಿ ರಾಮಾಯಣ ಆಧಾರಿತ ಗ್ರಂಥಾಲಯ ಮತ್ತು ಬುಡಕಟ್ಟು ಸಂಶೋಧನಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.