ಹುಬ್ಬಳ್ಳಿ : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿರುವುದು ಸಾಮಾನ್ಯ. ಆದರೆ, ಇಲ್ಲೊಂದು ಗ್ರಾಮ ಪಂಚಾಯತಿಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಅಧ್ಯಕ್ಷೆ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮ ಪಂಚಾಯ್ತಿಯಲ್ಲಿ ಪತಿ-ಪತ್ನಿಯರಿಬ್ಬರು ಅಧ್ಯಕ್ಷೆ, ಉಪಾಧ್ಯಕ್ಷರಾಗಿದ್ದಾರೆ.ವರೂರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ವಿಶಾಲಾಕ್ಷಿ ಅಧ್ಯಕ್ಷೆಯಾಗಿ, ಚೆನ್ನಬಸನಗೌಡ ಹನಮಂತಗೌಡ್ರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯ ಬಳಿಕ ನಡೆದಂತ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ವರೂರು ಗ್ರಾಮ ಪಂಚಾಯ್ತಿಯಲ್ಲಿ ಪತಿ, ಪತ್ನಿಯರಿಬ್ಬರು ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದಾರೆ.



