ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮಳಿಗೆಯಲ್ಲಿ ಬಾಡಿಗೆ ಬಾಕಿ ಉಳಿಸಿಕೊಂಡ 68 ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕಳೆದ ಎರಡು ದಿನಗಳಿಂದ ಮಹಾನಗರ ಪಾಲಿಕೆ ಸಿಬ್ಬಂದಿ ಬಾಕಿ ಉಳಿಸಿಕೊಂಡ ಮಳಿಗೆ ಗಳಿಗೆ ಬೀಗ ಹಾಕುತ್ತಿದ್ದಾರೆ.
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ 506 ಮಳಿಗೆಗಳನ್ನು ಬಾಡಿಗೆ ನೀಡಲಾಗಿದೆ. ಇವುಗಳಲ್ಲಿ ಅನೇಕ ವರ್ಷದಿಂದ ಬಾಡಿಗೆ ಕಟ್ಟದೇ ಉಳಿಸಿಕೊಂಡಿದ್ದಾರೆ. 2020-21 ಸಾಲಿಗೆ ಒಟ್ಟು 2.65 ಕೋಟಿ ಹಣ ಪಾಲಿಕೆಗೆ ಬರಬೇಕಿದೆ.



