ಬೆಂಗಳೂರು: ಮೂರು ಹಂತದ ಪಂಚಾಯಿತಿ ವ್ಯವಸ್ಥೆ ಬದಲಿಗೆ ರಾಜ್ಯದಲ್ಲಿ 2 ಹಂತದ ಪಂಚಾಯಿತಿ ವ್ಯವಸ್ಥೆ ಜಾರಿಗೆ ಸರ್ಕಾರ ತೀರ್ಮಾನಿಸಿದ್ದು, ತಾಲೂಕು ಪಂಚಾಯಿತಿಯನ್ನು ರದ್ದುಮಾಡಿ ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿಯನ್ನು ಉಳಿಸಿಕೊಳ್ಳಲು ಮುಂದಾಗಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಬಿಜೆಪಿ ಸದಸ್ಯ ಕುಮಾರ್ ಬಂಗಾರಪ್ಪ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ.
ತಾಲೂಕು ಪಂಚಾಯಿತಿಗೆ ಹೆಚ್ಚಿನ ಅನುದಾನ ಇಲ್ಲದ ಕಾರಣ ನಿರುಪಯುಕ್ತ ಸ್ಥಿತಿಗೆ ತಲುಪಿದೆ. ಇದನ್ನು ಕೈಬಿಟ್ಟರೆ ಆಡಳಿತಾತ್ಮಕ ಅನುಕೂಲದ ಜೊತೆಗೆ ವೆಚ್ಚ ಕಡಿಮೆಯಾಗಲಿದೆ. ಇದಕ್ಕೆ ಸಂವಿಧಾನದ ತಿದ್ದುಪಡಿ ಅಗತ್ಯವಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿಯೂ 2 ಹಂತದ ಪಂಚಾಯತಿ ವ್ಯವಸ್ಥೆ ಸೂಕ್ತ ಎಂದು ಹಲವು ಸದಸ್ಯರು ಹೇಳಿದ್ದಾರೆ.



