ರಾಯಚೂರು : ಜಾತ್ರೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದಂತ ಟ್ರ್ಯಾಕ್ಟರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿ ನಡೆದಿದೆ. ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.47 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು
ಸಿಂಧನೂರು ತಾಲೂಕಿನ ಕುರಗೋಡ ಗ್ರಾಮ ನಿವಾಸಿಗಳು ಅಂಬಾಮಠದ ಜಾತ್ರೆಗಾಗಿ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ಸೋಮಲಾಪುರದಿಂದ ಟ್ರ್ಯಾಕ್ಟರ್ ನಲ್ಲಿ ವಾಪಾಸ್ ಆಗುತ್ತಿದ್ದ ವೇಳೆ, ತಾಲೂಕಿನ ಗೋರೆಬಾಳ ಗ್ರಾಮದ ಬಳಿಯ ಸಿಂಧನೂರು-ಗಂಗಾವತಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ನಲ್ಲಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.