Connect with us

Dvgsuddi Kannada | online news portal | Kannada news online

ಖಾಸಗಿ ದೇವಸ್ಥಾನ,  ಟ್ರಸ್ಟ್  ಸ್ವಾಧೀನ ಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಮುಜರಾಯಿ ಸಚಿವ

ಪ್ರಮುಖ ಸುದ್ದಿ

ಖಾಸಗಿ ದೇವಸ್ಥಾನ,  ಟ್ರಸ್ಟ್  ಸ್ವಾಧೀನ ಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಮುಜರಾಯಿ ಸಚಿವ

ಉಡುಪಿ:  ರಾಜ್ಯದ ಖಾಸಗಿ ಒಡೆತನದ ದೇವಸ್ಥಾನ, ಟ್ರಸ್ಟ್ ಗಳನ್ನು  ಸ್ವಾಧೀನಪಡಿಸಿಕೊಳ್ಳುವ ಉದ್ದೇಶ ಕರ್ನಾಟಕ ಸರ್ಕಾರಕ್ಕಿಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

2011ರ ಧಾರ್ಮಿಕ ದತ್ತಿ ಕಾಯ್ದೆ ಅಡಿಯಲ್ಲಿ ಖಾಸಗಿ ದೇವಸ್ಥಾನಗಳ ನೋಂದಣಿ ಮಾಡಿಕೊಳ್ಳುವ ಬಗ್ಗೆ ಉಲ್ಲೇಖಿಸಲಾಗಿದ್ದು, ದೇವಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಎಂಬ ವದಂತಿ ಹೆಚ್ಚಿದ ಹಿನ್ನೆಲೆ ಸಚಿವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

2015ರಲ್ಲಿ ಖಾಸಗಿ ಆಡಳಿತದಲ್ಲಿರುವ ದೇವಸ್ಥಾನಗಳ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದ್ದು, ಪ್ರತಿವರ್ಷ ಮರುನೋಂದಣಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿತ್ತು. ಆದರೆ, ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಪ್ರತಿವರ್ಷ ನೋಂದಣಿ ಬಗ್ಗೆ ಜ್ಞಾಪಿಸುವುದನ್ನು ತಡೆ ಹಿಡಿಯಲಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top