ದಾವಣಗೆರೆ: ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೀಸಲಾತಿ ಹೆಚ್ಚಳ: ಮಾರ್ಚ್ 9ಕ್ಕೆ ಡೆಡ್ ಲೈನ್ ; ವಾಲ್ಮೀಕಿ ಶ್ರೀಗಳ ಸಾವಿನ ಹೇಳಿಕೆಯಿಂದ ವೇದಿಕೆಯಲ್ಲಿ ಗೊಂದಲ..!

ಕೊರೋನದಿಂದ ರಾಜ್ಯದ ಆರ್ಥಿಕ ಮಟ್ಟ ಕುಸಿದಿದ್ದು ಹಣಕಾಸಿನ ಇತಿಮಿತಿಯಲ್ಲಿಯೇ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಿದ್ದೇವೆ. ಕಳೆದ ಮೂರು ದಿನದಿಂದ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಪೂರ್ವಭಾವಿಯಾಗಿ ತೆರಿಗೆ ಸಂಗ್ರಹಣೆಯಾಗುತ್ತಿದೆ ಎಂದು ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಜಲಸಂಪನ್ಮೂಲ ಸಚಿವ ಮತ್ತು ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ರಮೇಶ್ ಲ.ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಸಂಸದರಾದ ಜಿ.ಎಂ.ಸಿದ್ದೇಶ್ವರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಎಸ್.ವಿ.ರಾಮಚಂದ್ರ, ಶಾಸಕರಾದ ಸತೀಶ ಲ.ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಡಾ.ಯತೀಂದ್ರ, ಚಿಕ್ಕಮಾದು, ರಾಜವೆಂಕಟಪ್ಪ ನಾಯಕ, ಡಿ.ಕೆ.ಶಿವಕುಮಾರ್, ನರಸಿಂಹನಾಯಕ ಉಪಸ್ಥಿತರಿದ್ದರು.