ಹರಿಹರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹರಿಹರದ ರಾಜನಹಳ್ಳಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಸರ್ಕಾರವಿದೆ ಎಂಬ ಕಾರಣಕ್ಕೆ ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆ. ಕಾಯ್ದೆಯನ್ನು ಜಾರಿಗೊಳಿಸುವಾಗ ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮಾತನಾಡಲೂ ಅವಕಾಶ ನೀಡಲಿಲ್ಲ ಎಂದು ಕಿಡಿಕಾರಿದರು.
ಕೇವಲ ಧ್ವನಿ ಮತದಿಂದ ಗೋಹತ್ಯೆ ಕಾಯ್ದೆ ಜಾರಿಗೆ ತಂದಿರುವ ಬಿಜೆಪಿ ಸರ್ಕಾರ ತಮ್ಮ ಅಧಿಕಾರದ ದುರುಪಯೋಗ ಪಡಿಸಿಕೊಂಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ನಾವು ಖಂಡಿಸುತ್ತೇವೆ ಎಂದರು.