ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಮನೆ ನಿರ್ಮಾಣಕ್ಕೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ.ಹಳ್ಳ, ತೊರೆಗಳಲ್ಲಿ ಮಾತ್ರ ಮರಳು ತೆಗೆಯಲು ಪ್ರತ್ಯೇಕ ಮರಳು ನೀತಿಯನ್ನು ಜಾರಿಗೆ ತರಲಾಗುತ್ತದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಕುರಿತು ಮಾಹಿತಿ ನೀಡಿದ್ದು, ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡಲಾಗುವುದು. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.ಸ್ವಂತ ಮನೆ ಅಥವಾ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ಮರಳನ್ನು ಬಳಸಬೇಕು. ಅದನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆಯ ವ್ಯಾಪ್ತಿಯಲ್ಲಿ ಎತ್ತಿನಗಾಡಿ, ಟ್ರ್ಯಾಕ್ಟರ್ ಗಳಲ್ಲಿ ಮರಳು ಸಾಗಿಸಬಹುದು. ಬೇರೆ ಜಿಲ್ಲೆಗಳಿಗೆ ಮರಳು ಸಾಗಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.