ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿರುದ್ಧ ಪುತ್ರಿಯಿಂದಲೇ ದೂರು ದಾಖಲಾಗಿದೆ. ನನ್ನ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದು, ಅವರಿಂದಲೇ ನನಗೆ ಜೀವ ಬೆದರಿಕೆಯಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸತ್ಯಜಿತ್ ಅವರ ಪುತ್ರಿಯೇ ತಂದೆಯ ವಿರುದ್ಧ ದೂರು ದಾಖಲಿಸಿದ್ದಾರೆ.
ಇಂದು ಹಿರಿಯ ನಟ ಸತ್ಯಜಿತ್ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಗೆ ತೆರಳಿ ಸತ್ಯಜಿತ್ ಪುತ್ರಿ ವೃತ್ತಿಯಲ್ಲಿ ಪೈಲೆಟ್ ಆಗಿರುವಂತ ಅಖ್ತರ್ ಸ್ವಲೇಹಾ ಅವರು, ನನ್ನ ತಂದೆ ಸತ್ಯಜಿತ್ ಅವರು, ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಹಣ ನೀಡದೇ ಇದ್ದಾಗ ರೌಡಿಗಳನ್ನು ಬಿಟ್ಟು ಬೆದರಿಸುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ.ನನಗೆ ರಕ್ಷಣೆ ನೀಡಬೇಕು ಹಾಗೂ, ಸತ್ಯಜಿತ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ದೂರು ನೀಡಿದ್ದಾರೆ. ಇದೀಗ ಪೊಲೀಸರು ಹಿರಿಯ ನಟ ಸತ್ಯಜಿತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.



