ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಫೆ. 14 ರ ಭಾನುವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 2.25 ಕ್ಕೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಆಗಮಿಸುವರು. ಮಧ್ಯಾಹ್ನ 3 ಗಂಟೆಗೆ ಸೂರಗೊಂಡನಕೊಪ್ಪದ ಭಾಯಾಗಡ್ ನಲ್ಲಿ ಏರ್ಪಡಿಸಲಾಗಿರುವ ಸಂತ ಸೇವಾಲಾಲ್ 282ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು.
ಸಂಜೆ 4.30 ಕ್ಕೆ ಸೂರಗೊಂಡನಕೊಪ್ಪದ ಭಾಯಾಗಡ್ನಿಂದ ನಿರ್ಗಮಿಸಿ, 5.30 ಕ್ಕೆ ದಾವಣಗೆರೆಯ ಸಕ್ರ್ಯೂಟ್ ಹೌಸ್ಗೆ ಆಗಮಿಸುವರು. ನಂತರ ಸಂಜೆ 6 ಗಂಟೆಗೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿರುವ ಪೊಗರು ಚಲನಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 7 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.