ಬೆಳಗಾವಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್, ನಾವು ಸ್ನೇಹಿತರು. ನೋಟಿಸ್ ಬರುತ್ತವೆ. ಲವ್ ಲೆಟರ್ ಬೇಡವೆಂದರೂ ಬರುತ್ತಿರುತ್ತವೆ. ಆದರೆ, ಅವರು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ ಎಂದು ಸಚಿವ ಉಮೇಶ್ ಕತ್ತಿ ಸಮರ್ಥಿಸಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಅನ್ಯಾಯವಾದಾಗ ಪ್ರತಿಭಟನೆ ನಡೆಸುತ್ತೇನೆ. ಮಂತ್ರಿಯಾಗಿದ್ದೇನೆಂದು ಸುಮ್ಮನಿರುವುದಿಲ್ಲ. ಯಾರೋ ಹೇಳಿದರೆಂದು ಮಾಡುವುದಿಲ್ಲ ಎಂದರು.



