Connect with us

Dvgsuddi Kannada | online news portal | Kannada news online

ಜಮ್ಮು ಕಾಶ್ಮೀರ ಮಸೂದೆ ಬೆಂಬಲಿಸಿದ ಬಿಎಸ್ ಪಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಪ್ರಮುಖ ಸುದ್ದಿ

ಜಮ್ಮು ಕಾಶ್ಮೀರ ಮಸೂದೆ ಬೆಂಬಲಿಸಿದ ಬಿಎಸ್ ಪಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಮಸೂದೆಯನ್ನು ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಬೆಂಬಲಿಸಿದೆ. ಇದಲ್ಲದೆ, ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.

ಜಮ್ಮು ಮತ್ತು ಕಾಶ್ಮೀರ ಮಸೂದೆ ಕುರಿತ ಚರ್ಚೆಯಲ್ಲಿ ಮಾತನಾಡಿದ ಬಿಎಸ್ ಪಿ ಸಂಸದ ಮಲೂಕ್ ನಗರ್ , ನಮ್ಮ ಪಕ್ಷ ಬಡವರು, ದಲಿತರು, ವಂಚಿತ ಸಮುದಾಯಗಳ ಪರವಾಗಿದೆ. ಕಾಶ್ಮೀರದಲ್ಲಿ 2019ರಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ  ಕಾಶ್ಮೀರದಲ್ಲಿ ಗುಜ್ಜರ್ ಮತ್ತು ಬ್ಯಾಕರ್ವಾಲ್ ಸಮುದಾಯಕ್ಕೆ ಮೀಸಲಾತಿ ಸಿಗುತ್ತಿದೆ.  ಗುಜ್ಜರ್ ಮತ್ತು ಬ್ಯಾಕರ್ವಾಲ್ ನಂತಹ ಹಿಂದುಳಿದ ಸಮುದಾಯಗಳು ಕಾಶ್ಮೀರದಲ್ಲಿ ಮೀಸಲಾತಿ ಹಕ್ಕುಗಳಿಂದ ವಂಚಿತರಾಗಿದ್ದರು. ಆದರೆ ಈಗ ಅವರು ತಮ್ಮ ಹಕ್ಕುಗಳನ್ನು ಪಡೆಯುತ್ತಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಡ ಮನೆಗಳಲ್ಲಿ ಊಟ ಮಾಡುತ್ತಾರೆ. ಆದರೆ ಕೇಂದ್ರದ ಬಡವರ ಪರವಾದ ನೀತಿಗಳನ್ನು ವಿರೋಧಿಸ್ತಾರೆ ಎಂದು ವಾಗ್ದಾಳಿ ನಡೆಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top