ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಫೆ.18ರಿಂದ ಫೆ.21ರವರೆಗೆ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಫೆ.19ರಿಂದ ಫೆ.21ರ ವರೆಗೆ 20ರಿಂದ 25 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಫೆ.20ರ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ.ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13 ಡಿ. ಸೆಲ್ಸಿಯಸ್ ದಾಖಲಾಗಿದೆ.
ಕರಾವಳಿ ಭಾಗದಲ್ಲಿ ಗರಿಷ್ಠ 31ರಿಂದ 32ಡಿ.ಸೆಲ್ಸಿಯಸ್ ಹಾಗೂ ಕನಿಷ್ಠ 21ರಿಂದ 23 ಡಿ.ಸೆಲ್ಸಿಯಸ್ ದಾಖಲಾಗಿತ್ತು. ಉತ್ತರ ಒಳನಾಡಿನಲ್ಲಿ ಗರಿಷ್ಠ 30ರಿಂದ 32 ಡಿ. ಸೆಲ್ಸಿಯಸ್, ಕಲುಬುರಗಿಯಲ್ಲಿ 34ರಿಂದ 35 ಡಿ.ಸೆಲ್ಸಿಯಸ್, ದಾವಣಗೆರೆಯಲ್ಲಿ 13 ಡಿ. ಸೆ.,ಬೆಳಗಾವಿಯಲ್ಲಿ 15 ಹಾಗೂ ಬೆಂಗಳೂರಿನಲ್ಲಿ ಕನಿಷ್ಠ 14 ಡಿ.ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 32 ಡಿ.ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿ.ಸೆಲ್ಸಿಯಸ್ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ



