ಮೈಸೂರು: ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಅನ್ನಭಾಗ್ಯ ಯೋಜನೆ ಯೋಜನೆಯ 7 ಕೆ.ಜಿ ಅಕ್ಕಿಗೆ ಈಗಿನ ಸರ್ಕಾರ 2 ಕೆಜಿ ಕಡಿಮೆ ಮಾಡಿದೆ. ಮುಂದೆ ನಮ್ಮ ಸರ್ಕಾರ ಬಂದ್ರೆ 10 ಕೆಜಿಗೆ ಹೆಚ್ಚಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರು ಜಿಲ್ಲೆ ಹುಣಸೂರು ಸುದ್ದಿಗಾರರೊಂದಿಗೆ ಮಾತನಾಡಿ, ಈಗಿನ ಸರ್ಕಾರ ಅನ್ನಭಾಗ್ಯ ಅಕ್ಕಿ ಕಡಿತಗೊಳಿಸಲಾಗಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಂದ ನಂತರ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಈ ಸರ್ಕಾರ ಡಕೋಟ ಸರ್ಕಾರ. ಯಡಿಯೂರಪ್ಪ ಡ್ರೈವಿಂಗ್ ಬಾರದ ಮುಖ್ಯಮಂತ್ರಿಯಾಗಿದ್ದು, ಅವರಿಗೆ ಡಕೋಟ ಬಸ್ ಕೊಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಒಂದೂವರೆ ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ ಬಗ್ಗೆ ಲೆಕ್ಕ ಕೊಡಲಿ. ಈ ಹಿಂದೆ ಸಂಗ್ರಹಿಸಿದ್ದ ಹಣದ ಬಗ್ಗೆ ಲೆಕ್ಕ ಕೊಡಲಿ. ರಾಮಮಂದಿರ, ರಾಮನ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.