ಬೆಂಗಳೂರು: 2021-22 ರ ಸಾಲಿನಲ್ಲಿ 28 ಲಕ್ಷ ರೈತರಿಗೆ 20 ಸಾವಿರ ಕೋಟಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸಾಲ ವಿತರಣಾ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನಕ್ಕಾಗಿ ನಬಾರ್ಡ್‌ಗೆ ಮನವಿ ಸಲ್ಲಿಸಲಾಗಿದೆ. ರೈತರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದ. ಈ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,300 ಕೋಟಿ ಸಾಲ ವಿತರಣೆ ಗುರಿ ಹಾಕಿಕೊಳ್ಳಲಾಗಿತ್ತು. ಈವರೆಗೆ 22,02,931 ಲಕ್ಷ ರೈತರಿಗೆ 13,739.28 ಕೋಟಿ ಸಾಲ ವಿತರಿಸಲಾಗಿದೆ. ಮಾರ್ಚ್ 31 ರೊಳಗೆ ನೂರಕ್ಕೆ ನೂರು ಗುರಿ ತಲುಪುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.