ಬೆಂಗಳೂರು : ಹೊಸಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಭರ್ಜರಿ ಜಯ ಗಳಿಸಿದ್ದ ಶರತ್ ಬಚ್ಚೇಗೌಡ ಅವರು, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಎಲ್ ಪಿಜಿ ಸಿಲಿಂಡರ್ ಗ್ರಾಹಕರಿಗೆ ಮತ್ತೊಂದು ಶಾಕ್; ಮತ್ತೆ 25 ದರ ಹೆಚ್ಚಿಸಿದ ಸರ್ಕಾರ; ಒಂದೇ ತಿಂಗಳಲ್ಲಿ ಮೂರು ಬಾರಿ ಏರಿಕೆ..!
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಸದಸ್ಯತ್ವ ಪತ್ರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಸದಸ್ಯತ್ವ ಪತ್ರವನ್ನು ಪಡೆಯುವ ಮೂಲಕ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಶರತ್ ಬಚ್ಚೇಗೌಡ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರರಾಗಿದ್ದಾರೆ. ಮಾ. 07 ರಂದು ನಡೆಯಬೇಕಿದ್ದ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ರದ್ದು
ಪಕ್ಷ ಸೇರ್ಪಡೆ ಗೊಂಡ ಬಳಿಕ ಮಾತನಾಡಿದಂತ ಮಾಜಿ ಸಿಎಂ ಸಿದ್ದರಾಮಯ್ಯ , ಹೊಸಕೋಟೆಯಲ್ಲಿ ಹಿಂಬಾಗಿಲಿನಿಂದ ಬಂದಂತ ಎಂಟಿಬಿ ನಾಗರಾಜ್, ಜನರು ವೋಟ್ ಹಾಕಿಲ್ಲ. ಹೊಸಕೋಟೆ ಜನರು ಶರತ್ ಗೆ ವೋಟ್ ಹಾಕಿದ್ದಾರೆ. ಎಂಟಿಬಿ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದರು.



