ಬೆಂಗಳೂರು: ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸದ್ಯ ಮೀಸಲಾತಿ ನೀಡಲು ಸಾಧ್ಯವಿಲ್ಲಿ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮಿಜಿ, ಕರುಣೆ ಬಂದಾಗ ನಮಗೆ ಮೀಸಲಾತಿ ಕೊಡಲಿ. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.
ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ, ಬೃಹತ್ ಸಮಾವೇಶದ ಬಳಿಕ ಇದೀಗ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ಆರಂಭವಾಗಿದೆ. ಪಂಚಮಸಾಲಿಗಳ ಬೇಡಿಕೆಗೆ ಒಪ್ಪದ ರಾಜ್ಯ ಸರ್ಕಾರ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದೆ. ಸರ್ಕಾರಕ್ಕೆ ಕರುಣೆ ಬಂದಾಗ ಮೀಸಲಾತಿ ನೀಡಲಿ. ಮಾರ್ಚ್ 04 ಬಳಿಕ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಬಗ್ಗೆ ಯೋಚಿಸುವುದಾಗಿ ತಿಳಿಸಿದ್ದಾರೆ.



