ದಾವಣಗೆರೆ: ಫೆ. 28 ರಂದು ನಗರದ ಶಿವಯೋಗಿ ಮಂದಿರದಲ್ಲಿ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮ ನಡೆಯಲಿದೆ. ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿಯನ್ನು ನೀಡಲಾಗುತ್ತದೆ. ಹಿರಿಯ ಸಾಹಿತಿ ಕೆ.ಮರುಳಸಿದ್ದಪ್ಪ ಅವರಿಗೆ ಜಯದೇವಶ್ರೀ, ಪ್ರೊ.ಎಚ್.ಲಿಂಗಪ್ಪಗೆ ಶೂನ್ಯಪೀಠ ಚನ್ನಬಸವಣ್ಣ ಹಾಗೂ ಪತ್ರಕರ್ತ ಬಸವರಾಜಸ್ವಾಮಿ ಅವರಿಗೆ ಶೂನ್ಯಪೀಠ ಅಲ್ಲಮ ಪ್ರಭು ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮಾಹಿತಿ ನೀಡಿದರು.
ಕರ್ನಾಟಕದ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾದ ಡಿ.ರೂಪಾ ಅವರ ಹುಟ್ಟೂರು ದಾವಣಗೆರೆ. ಜೆ.ಹೆಚ್.ದಿವಾಕರ್ ಮತ್ತು ಹೇಮಾವತಿ ಪುತ್ರಿಯಾದ ರೂಪಾ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಯನ್ನು ಪಡೆದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮನಃಶಾಸ್ತ್ರ ವಿಭಾಗದಲ್ಲಿ ಎಂಎ ಪದವಿ ಪಡೆದಿದ್ದಾರೆ. ನಂತರ ಐಪಿಎಸ್ ಅಧಿಕಾರಿ ಡಿ.ರೂಪಾ ಸೇವೆ ಸಲ್ಲಿಸುಥತಿದ್ದಾರೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯದ ತರಬೇತಿಯನ್ನು ಕೂಡ ಪಡೆದಿದ್ದಾರೆ.
ಇನ್ನೂ ಸಾಹಿತಿ, ಕನ್ನಡದ ಖ್ಯಾತ ವಿಮರ್ಶಕರಾದ ಕೆ. ಮರಳಸಿದ್ಧಪ್ಪ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರೂ ಆಗಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.



