ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲೆಕ್ಸ್‍ಗಳ ಮೂಲಕ ಜಾಹೀರಾತುಗಳನ್ನು ಪ್ರದರ್ಶಿಸಲು ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ತಪ್ಪಿದ್ದಲ್ಲಿ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976 ರ ಕಲಂ 138 ರೀತ್ಯಾ ಅಂತಹ ಜಾಹಿರಾತುಗಳನ್ನು ತೆಗೆದು ಹಾಕಲಾಗುವುದು ಎಂದು ಪಾಲಿಕೆ ಆಯುಕ್ತರಾದ ವಿಶ್ವನಾಥ.ಪಿ.ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಹಾನಗರಪಾಲಿಕೆಯ ಅನುಮತಿ ಪಡೆದುಕೊಳ್ಳದೇ ಶುಭಾಶಯ, ಅಭಿನಂದನೆ ಅಥವಾ ವಾಣಿಜ್ಯ ಹಾಗೂ ಇತ್ಯಾದಿ ಜಾಹಿರಾತುಗಳುಳ್ಳ ಪ್ಲೆಕ್ಸ್‍ಗಳನ್ನು ಅನಧಿಕೃತವಾಗಿ ಹಾಕುತ್ತಿರುವುದು ಕಂಡುಬರುತ್ತಿವೆ. ನಗರ ಸೌಂದರ್ಯ ಹಾಗೂ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ. ಆದ್ದರಿಂದ ಯಾವುದೇ ವ್ಯಕ್ತಿಯಾಗಲೀ ಅಥವಾ ಸಂಸ್ಥೆಯಾಗಲೀ ಜಾಹಿರಾತು ಪ್ರದರ್ಶನಕ್ಕೆ ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳದೆ ಹಾಕಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ಎಂದು ತಿಳಿಸಿದರು.



