ಮಂಗಳೂರು: ಗ್ಯಾಸ್ ಸಾಗಾಟದ ಟ್ಯಾಂಕರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಡೀಸೆಲ್ ಟ್ಯಾಂಕರ್ ಚಾಲಕ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹೊಸಮಜಲು ಬಳಿ ಇಂದು ಬೆಳಗ್ಗೆ ನಡೆದಿದೆ. ಸದಸ್ಯ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಡೀಸೆಲ್‌ನ ಟ್ಯಾಂಕರ್ ನಡುವೆ ಹೊಸಮಜಲು ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಡೀಸೆಲ್ ಟ್ಯಾಂಕರ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



