ದಾವಣಗೆರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರನ್ನು ದಾವಣಗೆರೆ ಜಿಲ್ಲೆ ಉಸ್ತುವಾರಿಯನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಹರ್ಷ ವ್ಯಕ್ತಿಪಡಿಸಿಸದ್ದು, ಸಲೀಂ ಅಹಮದ್ ಅವರನ್ನು ಅಭಿನಂದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಅನುಭವಿ ರಾಜಕಾರಣಿ ಸಲೀಂ ಅಹಮದ್ ನೇಮಕದಿಂದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ನ ಸಂಘಟನೆಗೆ ಆನೆಬಲ ಬಂದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ದಾವಣಗೆರೆ ಉಸ್ತುವಾರಿ ಮಾತ್ರವಲ್ಲದೆ, ತುಮಕೂರು, ಚಿತ್ರದುರ್ಗ, ಹಾವೇರಿ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಾಂಗ್ರೆಸ್ ಉಸ್ತುವಾರಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಆಡಳಿತದ ಜವಾಬ್ದಾರಿಯ ಜೊತೆಗೆ ಕಾಂಗ್ರೆಸ್ ಸೇವಾದಳದ ಉಸ್ತುವಾರಿ ಸಲೀಂ ಅಹಮದ್ ಅವರಿಗೆ ನೀಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ದಾವಣಗೆರೆ ಜಿಲ್ಲಾ ಉಸ್ತುವಾರಿಯಾಗಿ ನೇಮಕ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment