ವಿಜಯಪುರ : ಬಿಎಂಟಿಸಿ ಸಾರಿಗೆ ಬಸ್ ಪ್ರಯಾಣದ ದರ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಸದ್ಯಕ್ಕೆ ಬಸ್ ದರ ಹೆಚ್ಚಳವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೊನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.