ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನನ್ನ ಮೇಲೆ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಬಗ್ಗೆ ಹೈಕಮಾಂಡ್ ಗೆ ದೂರು ನೀಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ದಿಲ್ಲಿಗೆ ಹೋಗುತ್ತೇನೆ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದರು.
ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಪ್ರಸನ್ನ ಕುಮಾರ್ ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೆ, ಆದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಒಬ್ಬ ಹಾಲಿ ಶಾಸಕ ಇರಬೇಕಾದರೆ ಮತ್ತೊಬ್ಬ ನಾಯಕನನ್ನು ಕರೆದುಕೊಂಡು ಬಂದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಗುಂಪುಗಾರಿಕೆ ಆಗುವುದು ಸಹಜ ಎಂದರು.
ಡಿ.ಕೆ. ಶಿವಕುಮಾರ್, ಪಕ್ಷದಲ್ಲಿ ನನಗೆ ಬೆಂಬಲ ಕೊಟ್ಟಿಲ್ಲ.ನನ್ನ ಮನಗೆ ಬೆಂಕಿ ಬಿದ್ದಿದೆ. ನನಗೆ ನೋವಾಗಿದೆ. ನನಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಪ್ರಸನ್ನ ಕುಮಾರ್ ಅವರು ನನ್ನ ಬಗ್ಗೆ ಅವನು, ಇವನು ಎಂದು ಮಾತಾನಾಡಿದ್ದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.



