ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಪಕ್ಷದ ಹಿರಿಯ ನಾಯಕರೇ ಬಂಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಸದೃಢಗೊಳಿಸಲು ಸಿದ್ದರಾಮಯ್ಯ ಅವರಂತಹ ನಾಯಕರ ಅಗತ್ಯವಿದೆ. ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಸಿದ್ದರಾಮಯ್ಯ ಅವರಂತಹ ನಾಯಕರು ರಾಷ್ಟ್ರ ರಾಜಕಾರಣಕ್ಕೆ ಬರಬೇಕು ಎಂದರು.