ಕೊಪ್ಪಳ: ರಾಜ್ಯದಲ್ಲಿ ತಾಲೂಕು ಪಂಚಾಯಿತಿ ರದ್ದು ಮಾಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದರು.ತಾಲೂಕು ಪಂಚಾಯಿತಿಗಳನ್ನು ರದ್ದು ಮಾಡಲ್ಲ. ಅವುಗಳಿಗೆ ಹೆಚ್ಚಿನ ಅಧಿಕಾರ, ಅನುದಾನ ನೀಡಲಾಗುವುದು. ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯಲ್ಲಿ ತಾಲೂಕು ಪಂಚಾಯಿತಿ ಮಹತ್ವ ಪಡೆದಿದೆ. ಅದಕ್ಕೆ ಶಕ್ತಿ ನೀಡಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನದ ಕಾರಣ ಗ್ರಾಮಗಳು ಅಭಿವೃದ್ಧಿಯಾಗುತ್ತವೆ ಎಂದು ಸಚಿವರು ಹೇಳಿದ್ದಾರೆ