ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಪ್ರಕರಣ ಬಿರುಗಾಳಿ ಎಬ್ಬಿಸಿದೆ. ರಾಸಲೀಲೆ ಸಿಡಿಯಲ್ಲಿ ಪ್ರಭಾವಿ ಸಚಿವರೊಬ್ಬರ ವಿರುದ್ಧ ದೂರು ದಾಖಲಾಗಿದೆ.
ಅತ್ಯಾಚಾರದ ಸಂತ್ರಸ್ಥೆ ದೂರು ನೀಡಿಲ್ಲ. ಅವರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಘಟನೆ ನಡೆದು ತಿಂಗಳಾಗಿದ್ದು, ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಅವರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿದ್ದು, ಪೊಲೀಸ್ ಆಯುಕ್ತರಿಗೆ ಸಿಡಿ ಸಲ್ಲಿಸಿ ದೂರು ನೀಡಲಾಗಿದೆ.
ವಿಡಿಯೋದಲ್ಲಿರುವ ಯುವತಿಗೆ ಬೆದರಿಕೆ ಹಾಕಲಾಗಿದೆ. ಆಕೆಯ ಕುಟುಂಬದವರಿಗೂ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.



