Connect with us

Dvgsuddi Kannada | online news portal | Kannada news online

ಮಾನ, ಮರ್ಯಾದೆ ಇದ್ರೆ  ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ: ಸಿದ್ದರಾಮಯ್ಯ

ರಾಜಕೀಯ

ಮಾನ, ಮರ್ಯಾದೆ ಇದ್ರೆ  ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಹೊತ್ತಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಯಲಾಗಿರುವುದು ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ರೆ, ಕೂಡಲೇ  ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಬೇಕು. ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಹೇಳಿದ್ದಾರೆ. ಸಚಿವರ ಸಿಡಿ ಬಟಾಬಯಲಾಗಿದೆ. ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ  ಇದ್ದರೆ ಕೂಡಲೇ ರಾಜೀನಾಮೆ ಪಡೆಯಲಿ.  ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಸಿಎಂ ಬಿ.ಎಸ್.ಯಡಿಯೂರಪ್ಪ ತಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top