ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಜನರು ನಮ್ಮ ಉಗಿತಿದ್ದಾರೆ. ಇಡೀ ಸಮಾಜವೇ ತಲೆ ತಗ್ಗಿಸುವಂತಹ ಕೃತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಮಾನ, ಮರ್ಯಾದೆ ಇದ್ರೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಪ್ರಕರಣದಿಂದ ನಾವೆಲ್ಲ ರಾಜಕಾರಣಿಗಳು ಎಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ. ನಮ್ಮ ಮಕ್ಕಳು, ನಮ್ಮ ಕುಟುಂಬ ಇಂದು ನಮ್ಮನ್ನು ಹೇಗೆ ನೋಡಬಹುದು ಎಂಬುದು ಬೇಸರದ ಸಂಗತಿ ಎಂದು ಹೇಳಿದರು.
ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದಿಂದ ಎಲ್ಲಾ ರಾಜಕಾರಣಿಗಳಿಗೂ ಕೆಟ್ಟ ಹೆಸರು ಬರುವಂತಾಗಿದೆ. ಜನರು ನಮ್ಮನ್ನು ಉಗಿತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು.



