ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಸಿಎಂ ಅಂಗೀಕರಿಸಬಾರದಿತ್ತು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡದಿದ್ದರೂ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿ ಅವರು ಇಷ್ಟು ಬೇಗ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಈಗಿನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ತುಂಬಾ ದೊಡ್ಡದಿದೆ. ಅವರನ್ನು ಸಂಪುಟದಲ್ಲಿ ಉಳಿಸಿಕೊಂಡೇ ಸಿಡಿ ಬಹಿರಂಗವಾಗಿರುವುದರ ಬಗ್ಗೆ ಸೂಕ್ತ ತನಿಖೆ ನಡೆಸಬಹುದಿತ್ತು. ಅವರು ಯಾವುದೇ ತಪ್ಪು ಮಾಡಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.



