ದಾವಣಗೆರೆ: ದಾವಣಗೆರೆ ನಗರದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು ಸಾರ್ವಜನಿಕರು ಸಲಹೆ ಹಾಗೂ ಅಹವಾಲುಗಳನ್ನು ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ವಾಟ್ಸಾಪ್ ಸಂಖ್ಯೆ 9141930830 ಯನ್ನು ಸಾರ್ವಜನಿಕರ ಉಪಯೋಗಕ್ಕಾಗಿ ರಚಿಸಿದ್ದು, ಸಾರ್ವಜನಿಕರು ತಮ್ಮ ದೂರು, ಸಲಹೆಯನ್ನು ವಾಟ್ಸಾಪ್ ಮಾಡಬಹುದು.
ಕಾಮಗಾರಿಗಳ ಕುರಿತು ಸೂಕ್ತ ಸಲಹೆಗಳನ್ನು ನೀಡುವುದರ ಮುಖೇನ ಈ ವಾಟ್ಸಾಪ್ ಸಂಖ್ಯೆಯನ್ನು ಸದ್ಬಳಕೆ ಮಾಡಿಕೊಂಡು ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



