ಬೆಂಗಳೂರು: ಬಜೆಟ್ ಮಂಡನೆ ದಿನವೇ ಸಿಎಂ ನಿವಾಸ ಕಾವೇರಿ ಮುಂದೆ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಸಿಎಂ ನಿವಾಸ ಮುಂದೆ ಜಮಾಯಿಸಿದ ಪಂಚಮಸಾಲಿ ಸಮಾಜ ಮಹಿಳಾ ನಿಯೋಗ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ವೀಣಾ ಕಾಶಪ್ಪನವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಯನ್ನು 2ಎ ಮೀಸಲಾತಿ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದ ಈ ಪ್ರತಿಭಟನೆ ನಡೆಯುತ್ತಿದೆ.