ಧಾರವಾಡ: ಇಲ್ಲಿನ ಕೃಷಿ ಮಹಾವಿದ್ಯಾಲಯದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನಾಳೆ ಮಾರ್ಚ್ 10,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನ:ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಮಾರ್ಚ್ 10,2021ರಂದು ಮಧ್ಯಾಹ್ನ 2 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ಸ್ಥಳ:ಡೀನ್ (ಕೃಷಿ)ರವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ – 580005.