ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ತೆರಿಗೆ ನಿರ್ವಹಣೆ ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಣುಕಾ ಶ್ರೀನಿವಾಸ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಲ್.ಡಿ ಗೋಣೆಪ್ಪ, ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಮಾ ಪ್ರಕಾಶ್, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಮತಿ ಗೀತಾ ದಿಳ್ಯಪ್ಪ ಆಯ್ಕೆಯಾಗಿದ್ದಾರೆ.



